ಘಾಜ಼ಿಯಾಬಾದ್‌ನ ರಾಜ್ ನಗರ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ಬೀದಿಗಳಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಇದೀಗ ಮತ್ತೊಮ್ಮೆ ಕಾಣಿಸಿಕೊಂಡಿದೆ.
ಏಳು ದಿನಗಳಲ್ಲಿ ಎರಡನೇ ಬಾರಿಗೆ ರಾಜ್ ನಗರದ ಸೆಕ್ಟರ್ 10ರಲ್ಲಿ ಕಾಣಿಸಿಕೊಂಡಿರುವ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ನವೆಂಬರ್ 17ರಂದು ಈ ಚಿರತೆ ಮೊದಲ ಬಾರಿಗೆ ಈ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು.
ಜನಸಾಮಾನ್ಯರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆ ಬರೆದ ಟೊಮೆಟೊ ದರ; 15 ಕೆಜಿ ಬಾಕ್ಸ್ ಗೆ 3100 ರೂ.
ಮಸೂರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆ ಕಳೆದೊಂದು ವಾರದಿಂದ ಈ ಪ್ರದೇಶದ ಜನರದಲ್ಲಿ ಭೀತಿ ಮೂಡಿಸಿದೆ. ರಾತ್ರಿ ವೇಳೆ ಬೇಟನ್ ಇಟ್ಟುಕೊಂಡು ಮನೆಯಿಂದ ಆಚೆ ಬರಲು ಹಾಗೂ ಮನೆಗಳ ಬಾಗಿಲುಗಳನ್ನು ಮುಚ್ಚಿರಲು ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಮಾರ್ಗಸೂಚನೆಗಳನ್ನು ನೀಡುತ್ತಿದ್ದಾರೆ.