alex Certify ಹೊಲದಲ್ಲಿ ಕಳೆ ತೆಗೆಯುವಾಗಲೇ ಚಿರತೆ ದಾಳಿ: ಮಹಿಳೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಲದಲ್ಲಿ ಕಳೆ ತೆಗೆಯುವಾಗಲೇ ಚಿರತೆ ದಾಳಿ: ಮಹಿಳೆ ಬಲಿ

ಶಿವಮೊಗ್ಗ: ಮೆಕ್ಕೆಜೋಳದ ಹೊಲಕ್ಕೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಶಿವಮೊಗ್ಗ ಸಮೀಪದ ಬಿಕ್ಕೋನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.

ಯಶೋದಮ್ಮ(42) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕಳೆ ತೆಗೆಯುವ ವೇಳೆ ಚಿರತೆ ದಾಳಿ ಮಾಡಿದ್ದು, ಕುತ್ತಿಗೆ, ಬೆನ್ನಿನ ಭಾಗದಲ್ಲಿ ಗಾಯಗೊಳಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮದಲ್ಲಿ ಆತಂಕ ಹೆಚ್ಚಾಗಿದೆ. ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...