ಸಿಎಂ ಇಬ್ರಾಹಿಂ ‘ಒರಿಜಿನಲ್’ ಎಂದು ಬೋರ್ಡ್ ಹಾಕಿಕೊಳ್ಳಲಿ : H.D ಕುಮಾರಸ್ವಾಮಿ ಖಡಕ್ ಪ್ರತಿಕ್ರಿಯೆ

ಬೆಂಗಳೂರು : ಸಿ.ಎಂ.ಇಬ್ರಾಹಿಂ ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಉಚ್ಚಾಟನೆಯಾದರೂ ಮಾಡಲಿ ಏನಾದರೂ ಮಾಡಿಕೊಳ್ಳಲಿ ಅವರಿಗೆ ಬಿಟ್ಟಿದ್ದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

‘ಒರಿಜಿನಲ್ ಜೆಡಿಎಸ್ ನಮ್ಮದೇ, ಅಧ್ಯಕ್ಷ ಸ್ಥಾನದಿಂದ ತೆಗೆಯಲು ಆಗಲ್ಲ’ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸಿ.ಎಂ.ಇಬ್ರಾಹಿಂ ಫ್ರೀ ಇದ್ದಾರೆ ಏನು ಬೇಕಾದರೂ ಮಾತನಾಡಲಿ, ಉಚ್ಚಾಟನೆಯಾದರೂ ಮಾಡಲಿ ಏನಾದರೂ ಮಾಡಿಕೊಳ್ಳಲಿ ಅವರಿಗೆ ಬಿಟ್ಟಿದ್ದು. ನಾವು ಎಲ್ಲವನ್ನೂ ಸರಿ ಮಾಡುತ್ತೇವೆ. ನಮ್ಮ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷದ ನಾಯಕತ್ವದ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ‘ಜೆಡಿಎಸ್ ಒರಿಜಿನಲ್ ನಮ್ಮದೇ , ನಾವು ಬಿಜೆಪಿಗೆ ಸಪೋರ್ಟ್ ಮಾಡಲ್ಲ ನಾವು ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ ಎಂದು ಸಿ.ಎಂ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದರು. ನಾನು ಪ್ರತ್ಯೇಕವಾಗಿ ಕೋರ್ ಕಮಿಟಿಯನ್ನು ರಚನೆ ಮಾಡುತ್ತೇನೆ ಎಂದು ಹೇಳುವ ಮೂಲಕ ಇಬ್ರಾಹಿಂ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read