ಲೋಕಸಭೆಯ ಕಲಾಪದ ನಡೆಯುವಾಗಲೇ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ವ್ಯಾಪಕ ಸುದ್ದಿಯಾಗಿದ್ದಾನೆ. ಮನೋರಂಜನ್ ಯಾರು..? ಈತನ ಹಿನ್ನೆಲೆ ಏನು..? ಈತನ ಉದ್ದೇಶ ಏನಾಗಿತ್ತು ಎಂಬ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಲೋಕಸಭೆ ಭದ್ರತಾ ಲೋಪ ಪ್ರಕರಣ ಬಿಜೆಪಿಯನ್ನು ಟೀಕಿಸಲು ವಿಪಕ್ಷಗಳಿಗೆ ದೊಡ್ಡಆಹಾರವಾಗಿದೆ.
ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್ ದೇಶಕ್ಕೆ ‘ಮನರಂಜನೆ’ ನೀಡಿದ ‘ಮನೋರಂಜನ್’ ಹಿನ್ನೆಲೆ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಗುರುವಾರ ಮಾತನಾಡಿದ .ಕೆ ಹರಿಪ್ರಸಾದ್ ವಿಶ್ವಗುರು ನರೇಂದ್ರ ಮೋದಿಯವರನ್ನು ದೇವರು ಎಂದು ಮನೋರಂಜನ್ ಪರಿಗಣಿಸುತ್ತಿದ್ದರು. ಫೇಕ್ ಅಂಧ ಭಕ್ತರು ಯಾವ ರೀತಿ ಇರ್ತಾರೆ ಎಂದು ನಿನ್ನೆ ಸಾಬೀತು ಮಾಡಿದ್ದಾರೆ. ಆದ್ದರಿಂದ ವಿಶ್ವಗುರು ಇದರ ಹೊಣೆ ಹೊರಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು. ದೇಶಕ್ಕೆ ‘ಮನರಂಜನೆ’ ನೀಡಿದ ‘ಮನೋರಂಜನ್’ ಹಿನ್ನೆಲೆ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು. ಮನೋರಂಜನ್ ಹಿನ್ನೆಲೆಯನ್ನು ರಾಜ್ಯದ ಪೊಲೀಸರು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ದೆಹಲಿಯ ಸಂಸತ್ ಭವನದ ಒಳಗೆ ನುಗ್ಗಿ ದಾಂಧಲೆ ನಡೆಸಿದ ಇಬ್ಬರು ಯುವಕರಲ್ಲಿ ಮನೋರಂಜನ್ ಎಂಬಾತ ಮೈಸೂರು ನಗರದ ನಿವಾಸಿಯಾಗಿದ್ದಾನೆ. ಮೂಲತಃ ಹಾಸನಜಿಲ್ಲೆ ಅರಕಲಗೂಡು ತಾಲೂಕಿನ ಮಲ್ಲಾಪುರ ಗ್ರಾಮದವನಾಗಿದ್ದು, ಇವರ ತಂದೆ ದೇವರಾಜೇಗೌಡ ಮೈಸೂರಿನ ವಿಕ್ರಾಂತ್ ಟೈರ್ಸ್ ಕಂಪನಿಯಲ್ಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.