ಬೆಂಗಳೂರು : ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆದ ಆರೋಪಿ ಬಂಧನವಾದ ಬೆನ್ನಲ್ಲೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇದೀಗ ಓರ್ವ ಸ್ವಾಮೀಜಿ ಸೇರಿ ರಾಜ್ಯದ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ ಬರೆಯಲಾಗಿದೆ.
ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀ ಸೇರಿ ಮೂವರು ಸಚಿವರಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಸಚಿವ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಹಾಗೂ ಹಲವು ಪ್ರಗತಿಪರರು ವಿಚಾರವಾದಿಗಳಿಗೆ ಜೀವ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲೂರು ನಿಷ್ಕಲಮಂಟಪಕ್ಕೆ ಪತ್ರ ಬಂದಿದೆ.
ನಿಜಗುಣಾನಂದ ನಾನು ಬರೆದಿರುವ ಪತ್ರ ಪ್ರೇಮ ಪತ್ರ ಎಂದಾದರೂ ತಿಳಿ…..ಅಥವಾ ಸಾವಿನ ಪತ್ರವಂತಾದರೂ ತಿಳಿ…..ನಾನು ನಿನ್ನ ಜೊತೆ ತಮಾಷೆ ಮಾಡುತ್ತಿಲ್ಲ. ನೀನು ಮನುಷ್ಯ ರೂಪದಲ್ಲಿರುವ ರಾಕ್ಷಸ, ನೀನು ಆಯೋಜಿಸುವ ಪಾಪದ ಕಾರ್ಯಕ್ರಮದಲ್ಲೆ ನಿನ್ನ ಕಣ್ಣೆದುರಿಗೆ ನಿನ್ನ ಸಾವು ಬರುತ್ತೆ.. ನಿನ್ನಂಥ ದುಷ್ಟ ರಾಕ್ಷಸಿ ಸಂತತಿಯ ಸಂಹಾರವನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ.ನಿಮ್ಮ ಕೊನೆಯ ದಿನಗಳನ್ನು ಎಣಿಸಿ ಎಂದು ಅನಾಮಿಕ ವ್ಯಕ್ತಿ ಪತ್ರ ಬರೆದಿದ್ದಾನೆ. ನಟ ಚೇತನ್, ನಟ ಪ್ರಕಾಶ ರಾಜ್, ಪ್ರಿಯಾಂಕ್ ಖರ್ಗೆ ಸೇರಿ ಹಲವರ ಹೆಸರನ್ನು ಉಲ್ಲೇಖಿಸಲಾಗಿದೆ.