alex Certify ಮೇ 4 ರಿಂದ ಎಲ್ಐಸಿ ಷೇರುಗಳ ಮಾರಾಟ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 4 ರಿಂದ ಎಲ್ಐಸಿ ಷೇರುಗಳ ಮಾರಾಟ ಸಾಧ್ಯತೆ

ಭಾರತದ ಅತಿ ದೊಡ್ಡ ವಿಮಾ ಕಂಪನಿಯಾಗಿರುವ ಭಾರತೀಯ ಜೀವ ವಿಮಾ ನಿಗಮದ (ಎಲ್ಐಸಿ) ತನ್ನ ಷೇರುಗಳನ್ನು ಮಾರಾಟ ಮಾಡುವುದಕ್ಕೆ ಸಿದ್ಧತೆಯನ್ನು ಮಾಡಿಕೊಂಡಿದೆ.

ನಿಗಮದ ಆರಂಭಿಕ ಸಾರ್ವಜನಿಕ ಕೊಡುಗೆಯು (ಐಪಿಒ) ಮೇ 4 ರಿಂದ 9 ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದೆ ಎನ್ನಲಾಗಿದೆ. ಈ ಹಿಂದೆ ನಿಗಮದ ಶೇಕಡ 5 ರಷ್ಟು ಷೇರುಗಳನ್ನು ಸಾರ್ವಜನಿಕರ ಖರೀದಿಗೆ ಮುಕ್ತವಾಗಿರಿಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ಎಲ್ಐಸಿ ಶೇಕಡ 3.5 ರಷ್ಟು ಷೇರುಗಳನ್ನು ಮಾತ್ರ ಮಾರಾಟ ಮಾಡಲಿದೆ.

ಪ್ರಸ್ತುತ ಎಲ್ಐಸಿಯ ಮಾರುಕಟ್ಟೆ ಮೌಲ್ಯವು ಸುಮಾರು 6 ಲಕ್ಷ ಕೋಟಿ ರೂಪಾಯಿ ಎಂದು ಅಂದಾಜಿಲಾಗಿದ್ದು, ಇದೀಗ ಐಪಿಒ ಬಿಡುಗಡೆಯಿಂದಾಗಿ ಸಂಸ್ಥೆಯ ಬೊಕ್ಕಸಕ್ಕೆ 21 ಸಾವಿರ ಕೋಟಿ ರೂಪಾಯಿ ಬರಲಿದೆ ಎಂದು ಅಂದಾಜು ಮಾಡಲಾಗಿದೆ.

ರಷ್ಯಾ-ಯುಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಷೇರು ಮಾರುಕಟ್ಟೆ ಅಷ್ಟೊಂದು ಆಶಾದಾಯಕವಾಗಿಲ್ಲದಿರುವುದರಿಂದ ಶೇಕಡ 5 ಕ್ಕೆ ಬದಲಾಗಿ ಶೇಕಡ 3.5 ರಷ್ಟು ಷೇರುಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...