ಬೆಂಗಳೂರು : ರೈತರಿಗೆ ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಸದನದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವರು, ಕಳಪೆ ಬೀಜ, ಗೊಬ್ಬರ ಮಾರಾಟ ಮಾಡಿದ್ರೆ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಲಾಗುವುದು. ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡದಂತೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣ ದಳ ರಚನೆ ಮಾಡಲಾಗಿದೆ ಎಂದರು.
ಕಳೆದ 4 ವರ್ಷಗಳಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟದ61 ಪ್ರಕರಣಗಳು ಹಾಗೂ ಕಳಪೆ ರಸಗೊಬ್ಬರ ಮಾರಾಟ ಮಾಡಿದ 26 ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ ಎಂದು ತಿಳಿಸಿದ್ದಾರೆ.