alex Certify ಕಳಪೆ ಬೀಜ, ಗೊಬ್ಬರ ಮಾರಿದ್ರೆ ಮಾರಾಟಗಾರರ ಲೈಸೆನ್ಸ್ ರದ್ದು : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಳಪೆ ಬೀಜ, ಗೊಬ್ಬರ ಮಾರಿದ್ರೆ ಮಾರಾಟಗಾರರ ಲೈಸೆನ್ಸ್ ರದ್ದು : ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ

ಬೆಂಗಳೂರು : ರೈತರಿಗೆ ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸದನದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವರು, ಕಳಪೆ ಬೀಜ, ಗೊಬ್ಬರ ಮಾರಾಟ ಮಾಡಿದ್ರೆ ಮಾರಾಟಗಾರರ ಲೈಸೆನ್ಸ್ ರದ್ದು ಮಾಡಲಾಗುವುದು. ಕಳಪೆ ಬೀಜ ಮತ್ತು ರಸಗೊಬ್ಬರ ಮಾರಾಟ ಮಾಡದಂತೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಚಕ್ಷಣ ದಳ ರಚನೆ ಮಾಡಲಾಗಿದೆ ಎಂದರು.

ಕಳೆದ 4 ವರ್ಷಗಳಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟದ61 ಪ್ರಕರಣಗಳು ಹಾಗೂ ಕಳಪೆ ರಸಗೊಬ್ಬರ ಮಾರಾಟ ಮಾಡಿದ 26 ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...