alex Certify ಜುಲೈ 11ಕ್ಕೆ ‘ಲಿಗರ್’ ಚಿತ್ರದ ಮೊದಲ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ 11ಕ್ಕೆ ‘ಲಿಗರ್’ ಚಿತ್ರದ ಮೊದಲ ಹಾಡು ರಿಲೀಸ್

ಪೂರಿ ಜಗನ್ನಾಥ್ ನಿರ್ದೇಶನದ ವಿಜಯ್ ದೇವರಕೊಂಡ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಲಿಗರ್’ ಆಗಸ್ಟ್ 25 ರಂದು ತೆರೆಮೇಲೆ ಬರಲಿದ್ದು, ಈ ಚಿತ್ರದ ಮೊದಲ ಹಾಡು ಜುಲೈ 11ರಂದು ರಿಲೀಸ್ ಆಗಲಿದೆ.

ಈ ಕುರಿತು ಲಿಗರ್ ಚಿತ್ರತಂಡ ತನ್ನ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದೆ. ಈಗಾಗಲೇ ಸಾಕಷ್ಟು ಸದ್ದು ಮಾಡಿರುವ ಈ ಸಿನಿಮಾಗಾಗಿ ವಿಜಯ್ ದೇವರಕೊಂಡ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸಾಂಗ್ ಪ್ರೋಮೋ ಇಂದು ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.

ಈ ಚಿತ್ರದಲ್ಲಿ ಅನನ್ಯ ಪಾಂಡೆ ನಾಯಕಿಯಾಗಿ ನಟಿಸಿದ್ದು, ರಮ್ಯಾ ಕೃಷ್ಣ, ರೋನಿತ್ ರಾಯ್, ಮಕರಂದ್ ದೇಶಪಾಂಡೆ, ಮೈಕ್ ಟೈಸನ್, ವಿಷ್ಣು ರೆಡ್ಡಿ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಮಣಿ ಶರ್ಮ ಸಂಗೀತ ಸಂಯೋಜನೆ ನೀಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ರೆಡಿಯಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...