alex Certify BIG NEWS: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರ ನಿಷೇಧ

ಬೆಂಗಳೂರು: ಬೆಂಗಳೂರು -ಮೈಸೂರು ಹೈವೇಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಜುಲೈ 13ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದೆ. ದ್ವಿಚಕ್ರ ವಾಹನ, ಆಟೋ, ಟ್ರ್ಯಾಕ್ಟರ್ ಸೇರಿ ಲಘು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಪ್ರತಿ ಗಂಟೆಗೆ 80 ರಿಂದ 100 ಕಿಲೋಮೀಟರ್ ಮಾತ್ರ ಚಲಿಸುವಂತೆ ಆದೇಶ ಹೊರಡಿಸಲಾಗಿದೆ.

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಹೆಚ್ಚಳ ಹಿನ್ನಲೆಯಲ್ಲಿ ಈ ಕ್ರಮ ಕೈಗೊಂಡಿದ್ದು, ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮೋಟಾರು ವಾಹನ ಕಾಯ್ದೆ ಅನ್ವಯ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...