ಬೆಂಗಳೂರು : ರವೀಂದ್ರ ಕಲಾಕ್ಷೇತ್ರದಿಂದ ನೇರವಾಗಿ ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ನಿವಾಸಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿದ್ದು, ಲೀಲಾವತಿ ಅವರ ಮನೆಯಲ್ಲೇ ಅಂತಿಮ ಪೂಜಾ ವಿಧಿವಿಧಾನಗಳು ನೆರವೇರಲಿದೆ.
ಬಾಳೆ ಕಂಬ, ಮಡಿಕೆ, ಬಿದಿರು, ಕನಕಂಬರ, ಸೇವಂತಿಗೆ, ಗುಲಾಬಿ ಹೂವಿನಿಂದ ಚಟ್ಟ ನಿರ್ಮಿಸಲಾಗಿದೆ. ಲೀಲಾವತಿ ಅವರ ಮನೆಯಲ್ಲಿ ಪೂಜೆ ಸಲ್ಲಿಸಿದ ಬಳಿಕ, ಸೋಲೋದೇವನಹಳ್ಳಿಯ ಫಾರ್ಮ್ನ ಮುಂಭಾಗವೇ ಅಂತ್ಯಸಂಸ್ಕಾರ ನೆರವೇರಲಿದೆ.
ಸಂಜೆ 4 ಗಂಟೆಯಿಂದ ಲೀಲಾವತಿ ಅವರ ಅಂತಿಮ ವಿಧಿ ವಿಧಾನಗಳು ಆರಂಭವಾಗಲಿದ್ದು, ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಹಿರಿಯ ನಟಿ ಲೀಲಾವತಿ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ.
ಹಿರಿಯ ನಟಿ ಲೀಲಾವತಿ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿತ್ತು.