
ಬೆಳಗಾವಿ: ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಹೊರ ವಲಯದ ಜಾಕೋಲ್ ಬಳಿ ಘಟನೆ ನಡೆದಿದೆ.
ಸುರೇಶ್ ಇಂಚಲ(48) ಮೃತಪಟ್ಟವರು ಎಂದು ಹೇಳಲಾಗಿದೆ. ಹಿರಿಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಮೃತದೇಹ ತರುತ್ತಿದ್ದಂತೆ ಅಧಿಕಾರಿಗಳು ಕಚೇರಿಯಿಂದ ಕಾಲ್ಕಿತ್ತಿದ್ದಾರೆ. ಲೈನ್ ಮ್ಯಾನ್ ಕುಟುಂಬ ನ್ಯಾಯಕ್ಕಾಗಿ ಮೊರೆ ಇಟ್ಟಿದೆ. ಅವರ ಮನವೊಲಿಕೆಗೆ ಪೊಲೀಸರು ಪ್ರಯತ್ನ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.