alex Certify ಮಲೆನಾಡಲ್ಲಿ ಭಾರಿ ಮಳೆ: ಲಿಂಗನಮಕ್ಕಿ ಡ್ಯಾಂಗೆ 1 ಲಕ್ಷ ಕ್ಯೂಸೆಕ್ ಒಳಹರಿವು, ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲೆನಾಡಲ್ಲಿ ಭಾರಿ ಮಳೆ: ಲಿಂಗನಮಕ್ಕಿ ಡ್ಯಾಂಗೆ 1 ಲಕ್ಷ ಕ್ಯೂಸೆಕ್ ಒಳಹರಿವು, ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಸೂಚನೆ

ಶಿವಮೊಗ್ಗ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾಶಯದ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ ಸತತವಾಗಿ ಏರುತ್ತಿದೆ. ಹೆಚ್ಚುವರಿ ನೀರನ್ನು ಹೊರಬಿಡುವ ಸಂಭವ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಲು ಸೂಚನೆ ನೀಡಲಾಗಿದೆ.

ಜಲಾಶಯದ ಗರಿಷ್ಟ ಮಟ್ಟ 1819 ಅಡಿಗಳಾಗಿದ್ದು ಜು.23 ರ ಮಧ್ಯಾಹ್ನ 3 ಗಂಟೆಗೆ ಹೊತ್ತಿಗೆ ಜಲಾಶಯದ ನೀರಿನ ಮಟ್ಟ 1800.90 ಅಡಿಗಳಾಗಿರುತ್ತದೆ. ಈ ದಿನದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು ಒಂದು ಲಕ್ಷ ಕ್ಯೂಸೆಕ್ ಗಿಂತ ಅಧಿಕವಾಗಿದ್ದು, ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಟ ಮಟ್ಟ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರ ಬಿಡಲಾಗವುದು.

ಅಣೆಯಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿದಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮದಿಂದ ಪ್ರಕಟಣೆ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...