ಧರ್ಮ ಒಡೆಯುವ ಉದ್ದೇಶ ಯಾರಿಗೂ ಇರಲಿಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಸಿದ್ದರಾಮಯ್ಯ ಪಶ್ಚಾತ್ತಾಪದ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಸಮುದಾಯಕ್ಕೆ ಒಳ್ಳೆಯದಾಗಲಿ ಎಂದು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೇಡಿಕೆ ಇಟ್ಟಿದ್ದೆವು, ಲಿಂಗಾಯಿತ ಧರ್ಮ ಒಡೆಯುವ ಕೆಲಸಕ್ಕೆ ಯಾರೂ ಕೈ ಹಾಕಿರಲಿಲ್ಲ ಎಂದು ತಿಳಿಸಿದ್ದಾರೆ.
ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ ಸಂದರ್ಭದಲ್ಲಿ ಮನಸ್ತಾಪ ಉಂಟಾಗಿದೆ. ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ ವೇಳೆ ತಪ್ಪು ಕಲ್ಪನೆಗಳು ಹುಟ್ಟಿಕೊಂಡಿವೆ. ಚುನಾವಣೆಯ ಬಳಿಕ ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಮತ್ತೆ ಚರ್ಚಿಸುತ್ತೇವೆ. ಚುನಾವಣೆಯ ನಂತರ ಮತ್ತೆ ಎಲ್ಲರೂ ಒಟ್ಟಾಗಿ ಚರ್ಚಿಸಿ ಒಳ್ಳೆಯ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯನವರಿಗೆ ಪಶ್ಚಾತ್ತಾಪವಾಗಿದೆ. ಲಿಂಗಾಯತ ಧರ್ಮದ ವಿಚಾರದಲ್ಲಿ ನನ್ನನ್ನು ದಾರಿ ತಪ್ಪಿಸಿದ್ದರು. ನನಗೆ ಪಶ್ಚಾತ್ತಾಪವಾಗಿದೆ ಎಂದು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ ಎಂದು ಬಾಳೆಹೊನ್ನೂರು ಮಠದ ರಂಭಾಪುರಿ ಶ್ರೀಗಳು ಹೇಳಿದ್ದು, ಈ ಬಗ್ಗೆ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.