ತನ್ನ ಗ್ರಾಹಕರಿಗೆ ನೋಟಿಸ್ ಜಾರಿ ಮಾಡಿರುವ ಸ್ಟೇಟ್ ಬ್ಯಾಂಕ್ ತಂತಮ್ಮ ಖಾತೆಗಳಿಗೆ ಆಧಾರ್ ಕಾರ್ಡ್ ಲಿಂಕಿಂಗ್ ಮಾಡುವುದು ಕಡ್ಡಾಯ ಎಂದು ತಿಳಿಸಿದೆ.
“ನೇರ ನಗದು ವರ್ಗಾವಣೆ ಮೂಲಕ ಭಾರತ ಸರ್ಕಾರದಿಂದ ಯಾವುದೇ ಲಾಭ ಪಡೆಯಲಿರುವ ಫಲಾನುಭವಿಗಳ ಖಾತೆಗಳಿಗೆ ಆಧಾರ್ ಲಿಂಕಿಂಗ್ ಕಡ್ಡಾಯ” ಎಂದು ಸ್ಟೇಟ್ ಬ್ಯಾಂಕ್ ತನ್ನ ಟ್ವೀಟ್ ಮೂಲಕ ತಿಳಿಸಿದೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕಿಂಗ್ ಮಾಡುವುದು ಕಡ್ಡಾಯವಲ್ಲ. ಆದರೆ ಸರ್ಕಾರದ ಸಬ್ಸಿಡಿಗಳನ್ನು ಪಡೆಯಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಲಿಂಕಿಂಗ್ ಕಡ್ಡಾಯ.
ಪಿಎಫ್ ಗೂ ತೆರಿಗೆ – ಹೊಸ ಟ್ಯಾಕ್ಸ್ ನಿಯಮದಿಂದಾಗುವ ಪರಿಣಾಮದ ಬಗ್ಗೆ ಇಲ್ಲಿದೆ ಮಾಹಿತಿ
www.uidai.gov.inಗೆ ಭೇಟಿ ನೀಡುವ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿದ್ದೀರಾ ಎಂದು ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ.
ಇದಲ್ಲದೇ ಆನ್ಲೈನ್ ಬ್ಯಾಂಕಿಂಗ್, ಎಟಿಎಂ ಹಾಗೂ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ಕೊಟ್ಟು ಆಧಾರ್ ಲಿಂಕಿಂಗ್ ಮಾಡಿಕೊಳ್ಳಬಹುದಾಗಿದೆ.