alex Certify ಮದ್ಯ ಪ್ರಿಯರಿಗೆ ಮುಖ್ಯ ಮಾಹಿತಿ: 2 ದಿನ ಮದ್ಯ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯ ಪ್ರಿಯರಿಗೆ ಮುಖ್ಯ ಮಾಹಿತಿ: 2 ದಿನ ಮದ್ಯ ಮಾರಾಟ ನಿಷೇಧ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ 02-ಗುಲಬರ್ಗಾ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಇದೇ ಡಿಸೆಂಬರ್ 10 ರಂದು ಮತದಾನ ನಡೆಯಲಿದೆ. ಅದೇ ರೀತಿ ಡಿಸೆಂಬರ್ 14 ರಂದು ಮತ ಎಣಿಕೆ ನಡೆಯಲಿದೆ.

ಈ ಚುನಾವಣೆಯು ಮುಕ್ತ, ಶಾಂತಿಯುತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.

ಇದೇ ಡಿಸೆಂಬರ್ 10 ರಂದು ಮತದಾನದ ಪ್ರಯುಕ್ತ  ಡಿಸೆಂಬರ್ 8 ರ ಮಧ್ಯರಾತ್ರಿಯಿಂದ ಡಿಸೆಂಬರ್ 10ರ ಮಧ್ಯರಾತ್ರಿಯವರೆಗೆ ಹಾಗೂ ಡಿಸೆಂಬರ್ 14 ರಂದು ಮತ ಎಣಿಕೆ ಕಾರ್ಯದ ಪ್ರಯುಕ್ತ ಇದೇ ಡಿಸೆಂಬರ್ 14ರ ಬೆಳಿಗ್ಗೆ 6  ರಿಂದ ಡಿಸೆಂಬರ್ 15 ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ, ಶೇಖರಣೆ, ಹೊರಗಿನಿಂದ ಮದ್ಯ ಇತ್ಯಾದಿಗಳನ್ನು ತಂದು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಬಿಯರ್ ಬಾರ್ ಗಳು, ಮದ್ಯದ ಡೀಪೋ(ಕೆ.ಎಸ್.ಬಿ.ಸಿ.ಎಲ್.) ಗಳನ್ನು ಹಾಗೂ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಬೇಕೆಂದು ಅವರು ಆದೇಶ ಹೊರಡಿಸಿದ್ದು, ಈ ಮೇಲ್ಕಂಡ ದಿನಗಳಂದು ಶುಷ್ಕ ದಿನಗಳೆಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...