alex Certify ಸಂಸದರ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ; ಬಿಜೆಪಿ ತಾಲೂಕು ಅಧ್ಯಕ್ಷರ ತಲೆದಂಡ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸದರ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ; ಬಿಜೆಪಿ ತಾಲೂಕು ಅಧ್ಯಕ್ಷರ ತಲೆದಂಡ…!

ಭಾನುವಾರದಂದು ಸಂಸದ ಡಾ. ಕೆ ಸುಧಾಕರ್ ಅವರಿಗೆ ಅಭಿನಂದಿಸುವ ಸಲುವಾಗಿ ಬಿಜೆಪಿ – ಜೆಡಿಎಸ್ ಪಕ್ಷಗಳ ವತಿಯಿಂದ ನೆಲಮಂಗಲ ಸಮೀಪದ ಬಾವಿಕೆರೆ ಬಳಿ ಆಯೋಜಿಸಲಾಗಿದ್ದ ಸಮಾರಂಭದ ಸಂದರ್ಭದಲ್ಲಿ ಭಾಗವಹಿಸಿದವರಿಗೆ ಬಹಿರಂಗವಾಗಿಯೇ ಮದ್ಯ ಹಂಚಿಕೆ ಮಾಡಲಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೋವನ್ನು ಹಂಚಿಕೊಂಡಿದ್ದ ಹಲವರು, ಪೊಲೀಸರ ಸಮ್ಮುಖದಲ್ಲಿಯೇ ಬಹಿರಂಗವಾಗಿ ಮದ್ಯ ಹಂಚಿಕೆ ಮಾಡಿರುವುದರ ಕುರಿತಂತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಸಾರ್ವಜನಿಕ ವಲಯದಿಂದಲೂ ಆಕ್ಷೇಪ ವ್ಯಕ್ತವಾಗಿತ್ತು. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಸಂಸದ ಡಾ. ಕೆ. ಸುಧಾಕರ್, ನನಗೆ ಇದರ ಮಾಹಿತಿ ಇಲ್ಲ ಎಂದು ತಿಳಿಸಿದ್ದರು.

ಇದೀಗ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಆರ್. ರಾಮಕೃಷ್ಣ ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.

— ANI (@ANI) July 8, 2024

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...