ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಸೌಪರ್ಣಿಕಾ ಹೋಟೆಲ್ ನಲ್ಲಿ ಗಲಾಟೆ ಮಾಡಿದ ಐವರ ವಿರುದ್ಧ ಸಾಗರ ಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೋಟೆಲ್ನ ಪಾರ್ಕಿಂಗ್ ಜಾಗದಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದವರಿಗೆ ಹೋಟೆಲ್ ಒಳಗೆ ಹೋಗಿ ಮದ್ಯ ಸೇವಿಸಿ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡು ಹೋಟೆಲ್ ನ ನೇಮ್ ಬೋರ್ಡ್, ಪೀಠೋಪಕರಣ ಸೇರಿದಂತೆ ಎರಡು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಹಾನಿಗೊಳಿಸಿದ್ದಾರೆ. ಹೋಟೆಲ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದ್ದು, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸೇರಿದಂತೆ 5 ಜನರ ವಿರುದ್ಧ ಹೋಟೆಲ್ ಮಾಲೀಕ ವೀರೇಶ್ ದೂರು ನೀಡಿದ್ದಾರೆ.