ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ 7 ಕೋಟಿ ರೂಪಾಯಿ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ.
ಬೆಂಗಳೂರಿನ 816 ಕಡೆ ದಾಳಿ ನಡೆಸಿ 7 ಕೋಟಿ ರೂಪಾಯಿ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದ್ದು, 700 ಪ್ರಕರಣ ದಾಖಲಿಸಲಾಗಿದೆ.
ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 3.77 ಕೋಟಿ ಲೀಟರ್ ಐಎಂಎಲ್ ಮದ್ಯ, 2.85 ಕೋಟಿ ಲೀಟರ್ ಬಿಯರ್ ಮತ್ತು ಮದ್ಯ ಸಾಗಾಣಿಕೆಗೆ ಬಳಸಿದ್ದ 30 ವಾಹನಗಳನ್ನು ಜಪ್ತಿ ಮಾಡಿದ್ದಾರೆ.