alex Certify ಮದ್ಯ ಪ್ರಿಯರೇ ಗಮನಿಸಿ: ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ 1 ರಿಂದ 6 ರ ವರೆಗೆ ಅನಿರ್ದಿಷ್ಟ ಅವಧಿಗೆ ಮದ್ಯ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯ ಪ್ರಿಯರೇ ಗಮನಿಸಿ: ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ 1 ರಿಂದ 6 ರ ವರೆಗೆ ಅನಿರ್ದಿಷ್ಟ ಅವಧಿಗೆ ಮದ್ಯ ಮಾರಾಟ ನಿಷೇಧ

ಶಿವಮೊಗ್ಗ ಜಿಲ್ಲೆಯ ಮದ್ಯ ಪ್ರಿಯರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಲೋಕಸಭಾ ಚುನಾವಣೆ ಮತ ಎಣಿಕೆ, ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂನ್ 1 ರಿಂದ 6 ರ ವರೆಗೆ ಅನಿರ್ದಿಷ್ಟ ಅವಧಿಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಮತದಾನದ ಹಿನ್ನೆಲೆಯಲ್ಲಿ ಜೂನ್ 1 ರಂದು ಸಂಜೆ 4 ಗಂಟೆಯಿಂದ ಮದ್ಯ ಮಾರಾಟ ಸ್ಥಗಿತಗೊಳ್ಳಲಿದ್ದು, ಜೂನ್ 3 ರ ಸಂಜೆ 4 ಗಂಟೆಯಿಂದ ಮಧ್ಯರಾತ್ರಿ 12 ರ ವರೆಗೆ ಮತ್ತೆ ಮದ್ಯ ಮಾರಾಟ ನಡೆಯಲಿದೆ. ಬಳಿಕ ಜೂನ್ 4ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಅಂದು ಮದ್ಯ ಮಾರಾಟ ಸ್ಥಗಿತಗೊಳ್ಳಲಿದೆ.

ಲೋಕಸಭಾ ಚುನಾವಣೆಯ ಮತ ಎಣಿಕೆಯ ಮರುದಿನ ಅಂದರೆ ಜೂನ್ 5ರಂದು ಮಧ್ಯದಂಗಡಿಗಳು ಎಂದಿನಂತೆ ತೆರೆಯಲಿವೆ. ಆ ಬಳಿಕ ಜೂನ್ 6 ರಂದು ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಇದರ ನಂತರ ಜೂನ್ 7ರಿಂದ ಮದ್ಯ ಮಾರಾಟ ಎಂದಿನಂತೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...