alex Certify BIG NEWS: ಪುಕ್ಸಟ್ಟೆ ಮದ್ಯಕ್ಕೆ ಮುಗಿಬಿದ್ದ ಜನ, ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ದರು… | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುಕ್ಸಟ್ಟೆ ಮದ್ಯಕ್ಕೆ ಮುಗಿಬಿದ್ದ ಜನ, ಕೈಗೆ ಸಿಕ್ಕಷ್ಟು ಬಾಟಲಿ ಹೊತ್ತೊಯ್ದರು…

ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮದ್ಯ ಸರಬರಾಜು ಟ್ರಕ್, ಕ್ರೇನ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ.

ಸೀಗೆಹಳ್ಳಿ ಗೇಟ್ ಬಳಿ ವೇಗವಾಗಿ ಚಲಿಸುತ್ತಿದ್ದ ವಾಹನಗಳು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಪಘಾತದ ರಭಸಕ್ಕೆ ಮದ್ಯ ಸರಬರಾಜು ಟ್ರಕ್ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದಾಗಿ ಟ್ರಕ್ ನಲ್ಲಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಜನರು ಮುಗಿಬಿದ್ದು ಮದ್ಯದ ಬಾಟಲಿಗಳನ್ನು ಹೊತ್ತುಕೊಂಡು ಹೋಗಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...