ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕೆಪಿಟಿಸಿಎಲ್ ಇಂಜಿನಿಯರ್ ಹಾಗೂ ಕಿರಿಯ ಸಹಾಯಕರ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಅರ್ಹ, ಅನರ್ಹ ಹಾಗೂ ಅವ್ಯವಹಾರ ನಡೆಸಿದ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, 40 ಅಭ್ಯರ್ಥಿಗಳು ಅವ್ಯವಹಾರದಲ್ಲಿ ತೊಡಗಿದ ಆರೋಪ ಎದುರಿಸುತ್ತಿದ್ದಾರೆ. 2.02 ಲಕ್ಷ ಅಭ್ಯರ್ಥಿಗಳು ಕಿರಿಯ ಸಹಾಯಕರ ಹುದ್ದೆಗೆ ಅನರ್ಹರಾಗಿದ್ದಾರೆ. 1000 ಅಭ್ಯರ್ಥಿಗಳು ಅರ್ಹರಾಗಿದ್ದಾರೆ. http://kea.jar.nic.in ವೆಬ್ಸೈಟ್ನಲ್ಲಿ ಅರ್ಹರು, ಅನರ್ಹರ ಪಟ್ಟಿ ಪರಿಶೀಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.