ವಿಜಯಪುರ: ರಾಜ್ಯ ಬಿಜೆಪಿ ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದ್ದು, ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು ಪದಾಧಿಕಾರಿಗಳ ನೇಮಕದ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ್ದಾರೆ. ಪದಾಧಿಕಾರಿಗಳ ಆಯ್ಕೆ ನನ್ನ ಗಮನಕ್ಕೆ ಬಂದೇ ಇಲ್ಲ. ನಾವು ಬಿಜೆಪಿ ಕಾರ್ಯಕರ್ತರಲ್ಲ, ದೇಶದ ಕಾರ್ಯಕರ್ತರು. ನಿಷ್ಠಾವಂತ ಬಿಜೆಪಿಯವರಿಗಷ್ಟೇ ಪದಾಧಿಕಾರಿ ಸ್ಥಾನ ನೀಡಿದ್ದಾರೆ. ಅವರೆಲ್ಲರೂ ನಿಷ್ಠಾವಂತರು ಎಂದು ವ್ಯಂಗ್ಯವಾಡಿದ್ದಾರೆ.