ಕಾರವಾರ : 2-3 ದಿನಗಳಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪಕ್ಷದ ಸ್ಥಳೀಯ ಮುಖಂಡರ ಅಭಿಪ್ರಾಯವನ್ನು ಆಧರಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. 2-3 ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದರು.