ಬೆಂಗಳೂರು : ರಾಜ್ಯದ 6,346 ಗ್ರಾಮ ಪಂಚಾಯತಿ ಸದಸ್ಯರಿಗೆ ಅಕ್ಷರಾಭ್ಯಾಸ ನಡೆಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಚಿವರು ಗ್ರಾಮ ಪಂಚಾಯಿತಿಗಳ 6,346 ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಸಾಕ್ಷರರನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮವು ಸೆಪ್ಟೆಂಬರ್ 1ರಿಂದ ಆರಂಭಗೊಂಡಿದೆ. 21 ಜಿಲ್ಲೆಗಳಲ್ಲಿ ಅಕ್ಟೋಬರ್ 20ರ ವರೆಗೆ ಪ್ರತಿದಿನ 2 ಗಂಟೆಗಳಂತೆ 50 ದಿನ ಒಟ್ಟು 100 ಗಂಟೆ ತರಬೇತಿ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.