ಮಡಿಕೇರಿ : ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಮಡಿಕೇರಿಯಲ್ಲಿ ಒಂದು ಗ್ರೂಪ್-ಡಿ ಹುದ್ದೆ ಖಾಲಿ ಇದ್ದು, ಹೊರಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಠ ಎಸ್ಎಸ್ಎಲ್ಸಿ ತೇರ್ಗಡೆ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಡಿಸೆಂಬರ್, 18 ರಂದು ಬೆಳಗ್ಗೆ ನಡೆಯಲಿರುವ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಇಚ್ಛೆ ಇರುವ ಅಭ್ಯರ್ಥಿಗಳು ಆಯೋಗದ ದೂ.ಸಂ.08272-229852 ಅಥವಾ ಖುದ್ದಾಗಿ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.