ದೇಶದಲ್ಲಿ ಮತ್ತೆ ಕೋವಿಡ್ ಭೀತಿ ಹೆಚ್ಚಳ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದು ಆಸ್ಪತ್ರೆಗಳಲ್ಲಿ ಪರಿಶೀಲನೆ ನಡೆಯಲಿದೆ. ಕೋವಿಡ್ ಪ್ರಕರಣಗಳಲ್ಲಿ ಯಾವುದೇ ಹೆಚ್ಚಳವನ್ನು ನಿಭಾಯಿಸಲು ತಮ್ಮ ಸನ್ನದ್ಧತೆಯನ್ನು ನಿರ್ಣಯಿಸಲು ದೇಶಾದ್ಯಂತ ಆಸ್ಪತ್ರೆಗಳು ಕಸರತ್ತು ನಡೆಸಲಿವೆ. ಸಂಬಂಧಪಟ್ಟ ರಾಜ್ಯಗಳ ಆರೋಗ್ಯ ಮಂತ್ರಿಗಳು ಆಸ್ಪತ್ರೆಗಳಲ್ಲಿ ಪರೀಶೀಲನೆ, ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಲಿದ್ದಾರೆ.
ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಅವರು ಮೇಲ್ವಿಚಾರಣೆ ನಡೆಸಿದರು. ಎಲ್ಲಾ ಜಿಲ್ಲೆಗಳಲ್ಲಿ ಆರೋಗ್ಯ ಸೌಲಭ್ಯಗಳ ಲಭ್ಯತೆ, ಪ್ರತ್ಯೇಕ ಹಾಸಿಗೆಗಳ ಸಾಮರ್ಥ್ಯ, ಆಮ್ಲಜನಕ-ಬೆಂಬಲಿತ ಹಾಸಿಗೆಗಳು, ಐಸಿಯು (ತೀವ್ರ ನಿಗಾ ಘಟಕ) ಹಾಸಿಗೆಗಳು ಮತ್ತು ವೆಂಟಿಲೇಟರ್ ಬೆಂಬಲಿತ ಹಾಸಿಗೆಗಳಂತಹ ವ್ಯವಸ್ಥೆಗಳ ಮೇಲೆ ಮೇಲ್ವಿಚಾರಣೆ ನಡೆಯಲಿದೆ.
ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕಳೆದ ವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಇಂದೇ ಮೇಲ್ವಿಚಾರಣೆ ನಡೆಸುವಂತೆ ಕೋರಿದ್ದರು.
ಚಿತ್ರಮಂದಿರಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮಾಸ್ಕ್ ಬಳಕೆಗೆ ನಿರ್ದೇಶನ ನೀಡುವ ಮೂಲಕ ಕರ್ನಾಟಕವು ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಚಯಿಸಿದೆ. ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಎರಡು ಡೋಸ್ ಕೋವಿಡ್ ವ್ಯಾಕ್ಸಿನೇಷನ್ ಅನ್ನು ಕಡ್ಡಾಯಗೊಳಿಸಿದೆ.