ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ(96) ಅವರಿಗೆ ಮತ್ತೆ ಅನಾರೋಗ್ಯದ ಕಾರಣ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಬುಧವಾರವಾಷ್ಟೇ ಅವರು ಅನಾರೋಗ್ಯದ ಕಾರಣ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.
ತಜ್ಞ ವೈದ್ಯರ ತಂಡ ಅಡ್ವಾಣಿಯವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ಅಪೋಲೋ ಆಸ್ಪತ್ರೆ ತಿಳಿಸಿದೆ. ಮೂರು ಬಾರಿ ಬಿಜೆಪಿ ಅಧ್ಯಕ್ಷರಾಗಿ, ಕೇಂದ್ರ ಗೃಹ ಸಚಿವರಾಗಿ, ಉಪ ಪ್ರಧಾನಿಯಾಗಿ ಎಲ್.ಕೆ. ಅಡ್ವಾಣಿ ಸೇವೆ ಸಲ್ಲಿಸಿದ್ದು, ಕೆಲವು ತಿಂಗಳ ಹಿಂದೆಯಷ್ಟೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.