ಬೆಂಗಳೂರು: 1ನೇ ತರಗತಿ ಪ್ರವೇಶಕ್ಕೆ ಇದ್ದ ಗರಿಷ್ಠ ವಯೋಮಿತಿ ಗೊಂದಲಕ್ಕೆ ರಾಜ್ಯ ಸರ್ಕಾರ ಕೊನೆಗೂ ತೆರೆ ಎಳೆದಿದೆ. ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಎಲ್ ಕೆಜಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 4-6 ವರ್ಷ, ಯುಕೆಜಿ ಪ್ರವೇಶಕ್ಕೆ 5-7 ವರ್ಷ ನಿಗದಿ ಮಾಡಲಾಗಿದೆ. ಇದೇ ವೇಳೆ 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 6-8 ವರ್ಷ ನಿಗದಿ ಪಡಿಸಲಾಗಿದೆ.
8 ವರ್ಷ ಮೀರಿದರೂ ಶಾಲೆಗೆ ಸೇರದ ಮಕ್ಕಳನ್ನು ಶಾಲೆ ಬಿಟ್ಟ ಮಕ್ಕಳು ಎಂದು ಪರಿಗಣಿಸಲಾಗುತ್ತದೆ. ಅಲ್ಲದೇ ಅಂತಹ ಮಕ್ಕಳನ್ನು ಅವರ ವಯಸ್ಸಿಕೆ ತಕ್ಕಂತೆ ತರಗತಿಗಳ ಪ್ರವೇಶ ನೀಡಲಾಗುತ್ತದೆ. ಈ ಮೂಲಕ ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಇದ್ದ ವಯೋಮಿತಿ ಗೊಂದಲ ನಿವಾರಣೆಯಾದಂತಾಗಿದೆ.