ಬೆಂಗಳೂರು: ರಾಜ್ಯದಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ನವೆಂಬರ್ 8 ರಿಂದ ಎಲ್ಕೆಜಿ-ಯುಕೆಜಿ ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು.
ಈಗಾಗಲೇ ನವೆಂಬರ್ 8 ರಿಂದ ಅಂಗನವಾಡಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಅಂಗನವಾಡಿ ಜೊತೆಗೆ ಎಲ್ಕೆಜಿ-ಯುಕೆಜಿ ಸೇರಿದಂತೆ ನರ್ಸರಿ ಶಾಲೆಗಳ ಆರಂಭಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಮಾಂಟೆಸರಿಗಳು ಒತ್ತಾಯ ಮಾಡಿದ್ದವು. ಈ ಹಿನ್ನಲೆಯಲ್ಲಿ ಸರ್ಕಾರ ಅಂಗನವಾಡಿಯೊಂದಿಗೆ ಎಲ್ಕೆಜಿ-ಯುಕೆಜಿ ಆರಂಭಿಸಲು ಅನುಮತಿ ನೀಡಿದೆ.
ಎಲ್ಕೆಜಿ-ಯುಕೆಜಿ ಭೌತಿಕ ತರಗತಿಗಳ ಆರಂಭಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಎಲ್ಕೆಜಿ-ಯುಕೆಜಿ ಕೇಂದ್ರವನ್ನು ಸ್ವಚ್ಛಗೊಳಿಸಬೇಕು. ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿರುತ್ತದೆ. ಪೋಷಕರಿಗೆ 2 ಡೋಸ್ ಲಸಿಕೆ ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ.