alex Certify ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಸಮೀಪಿಸುತ್ತಿರುವಂತೆಯೇ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಯಾಗುವ ಸಾಧ್ಯತೆಯಿದೆ. ಬೇಡಿಕೆ ಮತ್ತು ಪೂರೈಕೆಯ ನಡುವೆ 1000 ಮೆ.ವ್ಯಾ. ವ್ಯತ್ಯಾಸ ಇರುವುದರಿಂದ ಲೋಡ್ ಶೆಡ್ಡಿಂಗ್ ಜಾರಿಯಾಗುವ ಸಾಧ್ಯತೆ ಇದೆ.

ವಿದ್ಯುತ್ ಬಳಕೆ ಪ್ರಮಾಣ ಹೆಚ್ಚಾಗಿರುವಂತೆಯೇ ವಿದ್ಯುತ್ ಬೇಡಿಕೆ ಮತ್ತು ಬಳಕೆ ಪ್ರಮಾಣದಲ್ಲಿ ಭಾರಿ ವ್ಯತ್ಯಾಸ ಕಂಡು ಬಂದಿದ್ದು, ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಯಾಗುವ ಸಾಧ್ಯತೆಯಿದೆ.

ವಿದ್ಯುತ್ ಬೇಡಿಕೆ ಹೆಚ್ಚಾಗಿದ್ದು, ಜಲವಿದ್ಯುತ್ ಕೇಂದ್ರಗಳು, ಸೌರ, ಥರ್ಮಲ್ ಪವರ್ ಪ್ಲಾಂಟ್ ಗಳ ಮೇಲೆ ಒತ್ತಡ ಹೆಚ್ಚಾಗಿದೆ. ಅಧಿಕೃತವಾಗಿ ಲೋಡ್ ಶೆಡ್ಡಿಂಗ್ ಜಾರಿ ಮಾಡಿದರೆ ಜನರಿಂದ ತೀವ್ರ ವಿರೋಧ ವ್ಯಕ್ತವಾಗುತ್ತದೆ ಎನ್ನುವ ಕಾರಣಕ್ಕೆ ಅನಧಿಕೃತವಾಗಿ ಲೋಡಿಂಗ್ ಮಾಡುವ ನಿಟ್ಟಿನಲ್ಲಿ ಸಿದ್ಧತೆ ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...