ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಮಳೆ ಕೊರತೆ ಕಾರಣ ಅಣೆಕಟ್ಟೆಗಳ ನೀರಿನಿಂದ ಬೇಡಿಕೆ ಅನುಸಾರವಾಗಿ ವಿದ್ಯುತ್ ಉತ್ಪಾದಿಸಿ ಪೂರೈಸಲಾಗುತ್ತಿದೆ. ಮಳೆ ಕೊರತೆ ವೇಳೆ ದಿನವಹಿ ಆಧಾರದಲ್ಲಿ ವಿದ್ಯುತ್ ವಿನಿಮಯ ಕೇಂದ್ರಗಳಿಂದ ವಿದ್ಯುತ್ ಖರೀದಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶ, ಪಂಜಾಬ್ ರಾಜ್ಯಗಳಿಂದ ನಿತ್ಯ 8.9 ದಶಲಕ್ಷ ಯೂನಿಟ್ ವಿದ್ಯುತ್ ಬ್ಯಾಂಕಿಂಗ್ ಸ್ವಾಪಿಂಗ್ ಆಫ್ ಪವರ್ ಮೂಲಕ ಪಡೆಯಲಾಗುತ್ತಿದೆ. ಕಳೆದ ವರ್ಷ ಡಿಸೆಂಬರ್ ವರೆಗೆ 34,44,582 ಕೃಷಿ ಪಂಪ್ಸೆಟ್ ಗಳು ಇದ್ದು, ಇವುಗಳಿಂದ 21,750 ಯುನಿಟ್ ವಿದ್ಯುತ್ ಬಳಕೆಯಾಗುತ್ತಿದೆ ಎಂದು ಹೇಳಿದ್ದಾರೆ.