alex Certify ಸಾಲ ಸೌಲಭ್ಯ: ವಾಹನ ಖರೀದಿ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲ ಸೌಲಭ್ಯ: ವಾಹನ ಖರೀದಿ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಅಹ್ವಾನ

ಬಳ್ಳಾರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ 2021-22ನೇ ಸಾಲಿನ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ(ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ) ಆನ್-ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶ್ರಮಶಕ್ತಿ ಸಾಲದ ಯೋಜನೆ, ಕಿರು(ಮೈಕ್ರೋ) ಸಾಲ ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಸಾಲ ವೈಯಕ್ತಿಕ ಯೋಜನೆ(ಮಹಿಳೆಯರಿಗೆ ಮಾತ್ರ) ಕೋವಿಡ್-19ರ ವಿಶೇಷ ಯೋಜನೆ, ಟ್ಯಾಕ್ಸಿ/ಅಟೋ ರಿಕ್ಷಾ/ ಗೂಡ್ಸ್ ಖರೀದಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು ಮತ್ತು ಮಾನದಂಡಗಳು:

ಅರ್ಜಿದಾರರು ಬಳ್ಳಾರಿ ಜಿಲ್ಲೆಯಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿದ್ದು, ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ 81 ಸಾವಿರ ರೂ.ಗಳು ಮತ್ತು ನಗರ ಪ್ರದೇಶದವರಿಗೆ 1.03ಲಕ್ಷ ರೂ.ಗಳು ಮೀರಿರಬಾರದು. ಶೇ.33ರಷ್ಟು ಮಹಿಳೆಯರಿಗೆ ಶೇ.3ರಷ್ಟು ಅಂಗವಿಕಲರಿಗೆ ಮೀಸಲಿರಿಸಿದ್ದು, ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಖಾತೆ ಪುಸ್ತಕ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಮತ್ತು ಜಾಮೀನುದಾರರ 2 ಭಾವಚಿತ್ರಗನ್ನು ನೀಡಬೇಕು. ಅರ್ಜಿದಾರರು ಕಡ್ಡಾಯವಾಗಿ IಈSಅ ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿಯನ್ನು ಸಲ್ಲಿಸಬೇಕು.

ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ. ಅರ್ಜಿಯನ್ನು  https://kmdconline.karnataka.gov.in/ ವೆಬ್‍ಸೈಟ್ ಮೂಲಕ ಆನ್‍ಲೈನ್‍ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿ.15ರಂದು ಕೊನೆಯ ದಿನವಾಗಿರುತ್ತದೆ.  ಆನ್-ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲೆಗಳನ್ನು ನಿಗಮದ ಕಚೇರಿಗೆ ಡಿ.15ರೊಳಗಾಗಿ ಸಲ್ಲಿಸಬೇಕು. ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...