alex Certify ಎಐ ತಂತ್ರಜ್ಞಾನ ದುರುಪಯೋಗದ ಬಗ್ಗೆ ಗಾಯಕಿ ಚಿನ್ಮಯಿ ಶ್ರೀಪಾದ ತೀವ್ರ ಕಳವಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಐ ತಂತ್ರಜ್ಞಾನ ದುರುಪಯೋಗದ ಬಗ್ಗೆ ಗಾಯಕಿ ಚಿನ್ಮಯಿ ಶ್ರೀಪಾದ ತೀವ್ರ ಕಳವಳ

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್ ವಿಡಿಯೋ ಇಂಟರ್ನೆಟ್ ನಲ್ಲಿ ವೈರಲ್ ಆಗಿದ್ದು, ಇದು ಕೃತಕ ಬುದ್ಧಿಮತ್ತೆಯ ಅಪಾಯಗಳ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಅಮಿತಾಬ್ ಬಚ್ಚನ್ ಸೇರಿದಂತೆ ಖ್ಯಾತನಾಮರು ಇದರ ವಿರುದ್ಧ ಧ್ವನಿಯೆತ್ತಿದ್ದಾರೆ.

ಎಐ ತಂತ್ರಜ್ಞಾನದ ದುರುಪಯೋಗದ ವಿರುದ್ಧ ಇದೀಗ ಗಾಯಕಿ ಚಿನ್ಮಯಿ ಶ್ರೀಪಾದ ಅವರು ಮಾತನಾಡಿದ್ದಾರೆ. ಇದು ಕೇವಲ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡಿಲ್ಲ. ಸಾಮಾನ್ಯ ಜನರನ್ನು ಕೂಡ ಗುರಿಯಾಗಿಸಿಕೊಂಡಿವೆ ಎಂದು ಅವರು ಹೇಳಿದ್ದಾರೆ.

ನಟಿಯನ್ನು ಬೆಂಬಲಿಸುವ ಪೋಸ್ಟ್‌ನಲ್ಲಿ ಚಿನ್ಮಯಿ, ಡೀಪ್‌ಫೇಕ್ ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮಕ್ಕೆ ಕರೆ ನೀಡಿದ್ರು. ಇದು ಮಹಿಳೆಯರನ್ನು ಸುಲಿಗೆ ಮಾಡುವ, ಬ್ಲ್ಯಾಕ್‌ಮೇಲ್ ಮಾಡುವ ಅಸ್ತ್ರವಾಗಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಡೀಪ್‌ಫೇಕ್‌ಗಳು ಹುಡುಗಿಯರನ್ನು ಗುರಿಯಾಗಿಸಲು ಮತ್ತು ಕಿರುಕುಳ ನೀಡಲು, ಅವರಿಂದ ಹಣವನ್ನು ಸುಲಿಗೆ ಮಾಡಲು ಅಥವಾ ಲೈಂಗಿಕ ದೌರ್ಜನ್ಯ ಎಸಗಲು ಒಂದು ಸಾಧನವಾಗಿ ಬಳಸಬಹುದು. ಅಲ್ಲದೆ, ಸಾಲದ ಆ್ಯಪ್‌ಗಳು ಮಹಿಳೆಯರ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ಹಣ ವಸೂಲಿ ಮಾಡಬಹುದು ಎಂದು ಗಾಯಕಿ ಚಿನ್ಮಯಿ ಕಳವಳ ವ್ಯಕ್ತಪಡಿಸಿದ್ದಾರೆ.

ಡೀಪ್‌ಫೇಕ್‌ಗಳು ಹೆಚ್ಚು ಅತ್ಯಾಧುನಿಕವಾಗುತ್ತಿವೆ. ಸಾಮಾನ್ಯ ವ್ಯಕ್ತಿಗೆ ಅವುಗಳನ್ನು ಪತ್ತೆಹಚ್ಚಲು ಕಷ್ಟವಾಗುತ್ತದೆ ಎಂದು ಅವರು ವಿವರಿಸಿದರು. ಡೀಪ್‌ಫೇಕ್‌ಗಳ ಅಪಾಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ರಾಷ್ಟ್ರವ್ಯಾಪಿ ಜಾಗೃತಿ ಅಭಿಯಾನಕ್ಕೆ ಅವರು ಒತ್ತಾಯಿಸಿದ್ರು.

ವೈರಲ್ ಆಗಿರುವ ಆಘಾತಕಾರಿ ವಿಡಿಯೋದಲ್ಲಿ ರಶ್ಮಿಕಾ ಮಂದಣ್ಣ ಲಿಫ್ಟ್‌ಗೆ ಪ್ರವೇಶಿಸುತ್ತಿರುವಂತೆ ತೋರುತ್ತಿದೆ. ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿಕೊಂಡು ವಿಡಿಯೋವನ್ನು ಕುಶಲತೆಯಿಂದ ನಿರ್ವಹಿಸಲಾಗಿದೆ. ಜಾರಾ ಪಟೇಲ್ ಅವರ ಮುಖವನ್ನು ರಶ್ಮಿಕಾ ಮಂದಣ್ಣ ಅವರಿಗೆ ಬದಲಾಯಿಸಲಾಗಿದೆ.

ಟ್ರೆಂಡಿಂಗ್ ವಿಡಿಯೋಗೆ ಪ್ರತಿಕ್ರಿಯಿಸುತ್ತಾ, ನಟಿ ತನ್ನ ಭಯ ಮತ್ತು ಸಂಕಟವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಪರಿಸ್ಥಿತಿಯ ಗಂಭೀರತೆಯನ್ನು ಗುರುತಿಸಿರುವ ಕೇಂದ್ರ ಸರ್ಕಾರವು ಡೀಪ್‌ಫೇಕ್ ವಿಡಿಯೋಗಳ ಸಮಸ್ಯೆಯನ್ನು ಪರಿಹರಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸಲಹೆಯನ್ನು ಕಳುಹಿಸುವ ಮೂಲಕ ಕ್ರಮ ಕೈಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...