ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಾಲ ಬಾಧೆ ತಾಳಲಾರದೆ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವಿ ಮುರಗೋಡ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಗೋಕುಲ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಘಟನೆ ನಡೆದಿದೆ. ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳ ಬಳಿ ರವಿ ಸಾಲ ಪಡೆದುಕೊಂಡಿದ್ದರು. ಸಾಲ ತೀರಿಸಲಾಗದೇ ಒತ್ತಡಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.