ಶಿವಮೊಗ್ಗ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ 2023-24 ನೇ ಸಾಲಿಗೆ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಹಾಗೂ ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿ.ವಿ.ಯಿಂದ ಭಾರತ ದೇಶದ ಪ್ರತಿಷ್ಠಿತ ಐಐಟಿ/ಐಐಎಂ/ಐಎಸ್ಸಿ ಸಂಸ್ಥೆಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮಾಡಬಯಸುವ ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗ ಸಾಲ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ನಿಗಮದ ವೆಬ್ಸೈಟ್ www.kmdconline.karnataka.gov.in ಮೂಲಕ ಭರ್ತಿ ಮಾಡಿ, ಪ್ರಿಂಟೌಟ್ ಪಡೆದ ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಅಚ್ಯುತ್ರಾವ್ ಲೇಔಟ್, 4ನೇ ತಿರುವು, ನಂಜಪ್ಪ ಆಸ್ಪತ್ರೆ ಮುಂಭಾಗ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು.ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ: 08182-228262 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.