alex Certify ಗಮನಿಸಿ : ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಕ್ಕೆ ‘ಸಾಲ ಸೌಲಭ್ಯ’ : ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ರಾಜ್ಯ ಸರ್ಕಾರದಿಂದ ವಿವಿಧ ಸಮುದಾಯಕ್ಕೆ ‘ಸಾಲ ಸೌಲಭ್ಯ’ : ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ.!

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ ವಿವಿಧ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ.

ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ, ಅರಿವು–ಶೈಕ್ಷಣಿಕ ಸಾಲ ಯೋಜನೆ., ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ., ಸ್ವಾವಲಂಬಿ ಸಾರಥಿ ಯೋಜನೆ., ಸ್ವಯಂ ಉದ್ಯೋಗಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)., ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ವೆಬ್ ಸೈಟ್ https://www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು.

ಹೊಲಿಗೆ ಯಂತ್ರ ವಿತರಣೆ ಯೋಜನೆ (ದೇವರಾಜ ಅರಸು ನಿಗಮದ ವ್ಯಾಪ್ತಿಗೆ ಒಳಪಡುವ ಸಮುದಾಯದವರಿಗೆ)., ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ (ವಿಶ್ವಕರ್ಮ ಸಮುದಾಯದವರಿಗೆ ಮಾತ್ರ)., ಭೋಜನಾಲಯ ಕೇಂದ್ರ (ವೀರಶೈವ-ಲಿಂಗಾಯತ ಸಮುದಾಯದವರಿಗೆ)., ವಿಭೂತಿ ನಿರ್ಮಾಣ ಘಟಕ (ವೀರಶೈವ-ಲಿಂಗಾಯತ ಸಮುದಾಯದವರಿಗೆ). ಮತ್ತು ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ (ಮರಾಠ ಸಾಮುದಾಯದವರಿಗೆ)ಗಳ ಸಾಲ ಸೌಲಭ್ಯ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾ,ಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು ನಗರ ಜಿಲ್ಲೆ -560 010 ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-23156066 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...