ಬೆಂಗಳೂರು: ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗುವುದೇ ಎಂಬುದರ ಕುರಿತಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಕೃಷಿ ಸಾಲ ಅವಧಿ ವಿಸ್ತರಣೆ ಕುರಿತಾಗಿ ಕೇಂದ್ರವೇ ನಿರ್ಧರಿಸಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೃಷಿ ಸಾಲದ ಬಗ್ಗೆ ಕೇಂದ್ರ ಬರ ಅಧ್ಯಯನ ತಂಡದ ಜೊತೆಗೆ ಚರ್ಚೆ ನಡೆಸಲಾಗಿದೆ. ಕೃಷಿ ಸಾಲ ಮರುಪಾವತಿ ಅವಧಿ ವಿಸ್ತರಣೆ, ಹೊಸ ಸಾಲ ವಿತರಣೆ ಸಂಬಂಧ ಕೇಂದ್ರ ಸರ್ಕಾರವೇ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅವರು, ಬರಗಾಲದ ಹಿನ್ನೆಲೆಯಲ್ಲಿ ಕೃಷಿ ಸಾಲ ಮನ್ನಾ ಮಾಡಲಾಗುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೃಷಿ ಸಾಲ ವಿಚಾರ ಕುರಿತಾಗಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಚರ್ಚೆ ನಡೆಸಲಾಗಿದ್ದು, ಅಧ್ಯಯನ ತಂಡದ ವರದಿ ಆಧರಿಸಿ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರದಂತೆ ಮುಂದಿನ ಕ್ರಮ ವಹಿಸುವುದಾಗಿ ಹೇಳಿದ್ದಾರೆ.