ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ 2023-24ನೇ ಸಾಲಿಗೆ ಮುಂದುವರೆದಿದ್ದು, ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕೆ, ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಉತ್ಪಾದನೆ ವಲಯಕ್ಕೆ 50 ಲಕ್ಷ ರೂ.ವರೆಗೆ ಮತ್ತು ಸೇವಾ ವಲಯಕ್ಕೆ 20 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.
ಈ ಸೌಲಭ್ಯವು ಹೊಸದಾಗಿ ಪ್ರಾರಂಭಿಸುವ ಚಟುವಟಿಕೆಗಳಿಗೆ ಮಾತ್ರ ಅವಕಾಶ ಇರುತ್ತದೆ. ಈ ಬಗ್ಗೆ ಧಾರವಾಡ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಂದ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‍ಸೈಟ್ www.kviconline.gov.in/pmegpeportal ವೆಬ್‍ಸೈಟ್‍ನಲ್ಲಿ ತಿಳಿಸಿದ ಮಾರ್ಗಸೂಚಿಯಂತೆ ಅರ್ಜಿಯನ್ನು ಆನ್‍ಲೈನ್‍ನಲ್ಲಿ ಸಲ್ಲಿಸಿ ದಾಖಲಾತಿಗಳೊಂದಿಗೆ ಕಚೇರಿಗೆ ಸಂಪರ್ಕಿಸಬಹುದು.
ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2322627, ಕೈಗಾರಿಕಾ ವಿಸ್ತರಣಾಧಿಕಾರಿ, ಹುಬ್ಬಳ್ಳಿ, ಕುಂದಗೋಳ, ನವಲಗುಂದ ಹಾಗೂ ಅಣ್ಣಿಗೇರಿ ಇವರ ಮೊಬೈಲ್ ಸಂಖ್ಯೆ 9902412428 ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ, ಧಾರವಾಡ, ಕಲಘಟಗಿ ಹಾಗೂ ಅಳ್ನಾವರ ಇವರ ಮೊಬೈಲ್ ಸಂಖ್ಯೆ 9886251096 ನ್ನು ಸಂಪರ್ಕಿಸಬಹುದು ಎಂದು ಧಾರವಾಡ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.