alex Certify ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಮೈಸೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದಿಂದ ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ 2021-22ನೇ ಸಾಲಿನಲ್ಲಿ ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ, ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ.

ಸೌಲಭ್ಯ ಪಡೆಯ ಬಯಸುವವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000 ರೂ. ಮತ್ತು ಪಟ್ಟಣ ಪ್ರದೇಶದವರಿಗೆ 55,000 ರೂ. ಒಳಗಿರಬೇಕು ಮತ್ತು ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಸಮಾಜದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ https://suvidha.karnataka.gov.in ಹಾಗೂ www.kvcdc1.karnataka.gov.in ನಲ್ಲಿ ಪಡೆದು, ಅರ್ಜಿಯೊಂದಿಗೆ ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ಪೋಟೋ ಮತ್ತು ಇತರೆ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ 2022ನೇ ಜನವರಿ 10 ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 080-22374848 ಹಾಗೂ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0821-2341194 ನ್ನು ಸಂಪರ್ಕಿಸುವಂತೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...