ನವದೆಹಲಿ: ಕೊರೊನಾ ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ಲಾಕ್ಡೌನ್ ಮಾಡುವಂತೆ ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.
ಹೆಚ್ಚು ಆಕ್ರಮಣಕಾರಿ ಆಗಿರುವ ರೂಪಾಂತರ ವೈರಸ್ ವೇಗವಾಗಿ ಹರಡುವುದನ್ನು ತಡೆಯಲು ಲಾಕ್ಡೌನ್ ಜಾರಿ ಮಾಡಬೇಕಿದೆ. ಸೋಂಕು ಹರಡುವುದನ್ನು ತಡೆಯುವಲ್ಲಿ ವಿಫಲವಾಗಿದ್ದರಿಂದ ಆರೋಗ್ಯ ವ್ಯವಸ್ಥೆ ಬೆಲೆ ತೆರಬೇಕಾಗಿದೆ. ಸಕ್ರಿಯ ಪ್ರಕರಣಗಳ ನಿಯಂತ್ರಣಕ್ಕೆ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಆರೋಗ್ಯ ಮೂಲಸೌಕರ್ಯ, ಬೆಡ್, ಆಕ್ಸಿಜನ್ ವ್ಯವಸ್ಥೆ ಕಲ್ಪಿಸುವ ಜತೆಗೆ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಲಾಕ್ಡೌನ್ ಜಾರಿಗೊಳಿಸಬೇಕು ಎಂದು ತಿಳಿಸಿದ್ದಾರೆ.