
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾರುತಿಪುರದಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಲಾಗಿದೆ.
ಮಾರುತಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸುಧೀಂದ್ರ ಹೊಳ್ಳ ಅವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮುಂಭಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.