
ಬೆಂಗಳೂರು: ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಮೂರರಿಂದ ನಾಲ್ಕು ದಿನಗಳಲ್ಲಿ ತಜ್ಞರು, ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಲಾಕ್ಡೌನ್ ಕುರಿತಾಗಿ ಮುಖ್ಯಮಂತ್ರಿಯವರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಕಟ್ಟುನಿಟ್ಟಿನ ಕ್ರಮ ಮುಂದುವರಿಸುವಂತೆ ಸೂಚನೆ ನೀಡಲಾಗಿದೆ. ಜೂನ್ 30ರವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ಬಂದಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಜೂನ್ 7 ರವರೆಗೂ ಇದೇ rIti ಲಾಕ್ಡೌನ್ ಇರುತ್ತದೆ. ಯಾವುದೇ ಬದಲಾವಣೆ ಇರುವುದಿಲ್ಲ. ಕೊರೋನಾ ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ಮುಂದುವರೆಸುವ ಕುರಿತು ಸಿಎಂ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.