ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಆತಂಕ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿದೇಶದಲ್ಲಿ ಕಂಡು ಬಂದ ಒಮಿಕ್ರಾನ್ ತಡೆಗೆ ರಾಜ್ಯ ಸರ್ಕಾರ ಹಲವು ರೀತಿಯ ಕಠಿಣ ಕ್ರಮ ಕೈಗೊಂಡಿದೆ. ಈಗ ಲಾಕ್ಡೌನ್ ಮಾಡುವ ಪ್ರಸ್ತಾಪವೇ ಇಲ್ಲವೆಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಯಾವುದೇ ಪ್ರಸ್ತಾಪವಿಲ್ಲ. ಜನರು ಆತಂಕ ಪಡುವ ಅಗತ್ಯವಿಲ್ಲ. ಶಾಲೆ ಕಾಲೇಜುಗಳಿಗೆ ರಜೆ ನೀಡುವ ಅಗತ್ಯವಿಲ್ಲ. ನಿಗಾ ವಹಿಸಲಾಗಿದೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಲಾಕ್ ಡೌನ್ ಪ್ರಸ್ತಾಪವಿಲ್ಲ ಎಂದು ಸಿಎಂ ಹೇಳಿದ್ದಾರೆ.
ಇನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, ಲಾಕ್ಡೌನ್ ಬಗ್ಗೆ ಸುಳ್ಳುಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.