
ಬೆಂಗಳೂರು: ಜೂನ್ 7 ರ ವರೆಗೆ ರಾಜ್ಯದಲ್ಲಿ ಘೋಷಿಸಲಾದ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜೂನ್ 14 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆ ಪ್ರಮಾಣ ಕಡಿಮೆ ಆಗಿಲ್ಲ, ಆದ್ದರಿಂದ ಸರ್ಕಾರ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಕಠಿಣ ನಿಯಮ ಮುಂದುವರೆಸಲಿದೆ ಎಂದು ಹೇಳಿದ್ದಾರೆ.