
ಬೆಂಗಳೂರು: ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ಡೌನ್ ಸೋಮವಾರದಿಂದ ಜಾರಿ ಮಾಡುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ತಳ್ಳುವ ಗಾಡಿಗಳಲ್ಲಿ ತರಕಾರಿ ಮಾರಾಟಕ್ಕೆ ಅವಕಾಶವಿದೆ. ಹಾಲಿನ ಬೂತ್ ತೆರೆಯಲು ಅವಕಾಶವಿದೆ. ಕೈಗಾರಿಕೆ, ಹೋಟೆಲ್, ಪಬ್, ಬಾರ್ ಬಂದ್ ಮಾಡಲಾಗುವುದು. ಮೇ 14 ರಿಂದ 24 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಮಾರಾಟ, ಖರೀದಿಗೆ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.