ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮೇ 10 ರಿಂದ 24 ರ ವರೆಗೆ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಜಿಲ್ಲೆಯಿಂದ ಜಿಲ್ಲೆಗೆ ಓಡಾಡಲು ಅವಕಾಶ ಇರುವುದಿಲ್ಲ. ಸಾರಿಗೆ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ. ಬೆಳಗ್ಗೆ 10 ಗಂಟೆಯ ನಂತರ ಯಾರೂ ಕೂಡ ರಸ್ತೆಗೆ ಇಳಿಯುವಂತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿ ಮಾಡುವ ಕುರಿತಾಗಿ ಅವರು ಮಾಹಿತಿ ನೀಡಿ, ಮೇ 10 ರಿಂದ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು ಬಂದ್ ಆಗಲಿವೆ. ಸರ್ಕಾರಿ ಕಚೇರಿಗಳು ಭಾಗಶಃ ಕಾರ್ಯನಿರ್ವಹಿಸಲಿವೆ. ವಿಮಾನ, ರೈಲು ಸಂಚಾರಕ್ಕೆ ಅವಕಾಶ ಇರುತ್ತದೆ. ಮದ್ಯ ಪಾರ್ಸಲ್ ಗೆ ಅವಕಾಶ ಇಲ್ಲ. ಯೋಗ ಕೇಂದ್ರ, ಕ್ರೀಡಾ ಕೇಂದ್ರ, ಪಾರ್ಕ್ ಇರುವುದಿಲ್ಲ. ಕೃಷಿ ಚಟುವಟಿಕೆಗೆ ಅವಕಾಶವಿದೆ.