ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಪರಿಶೀಲನೆ ನಡೆಸುವಂತೆ ತಜ್ಞರ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ.
ಏಪ್ರಿಲ್ ಅಂತ್ಯದ ವೇಳೆಗೆ ವಾರಾಂತ್ಯ ಲಾಕ್ಡೌನ್ ಜಾರಿ ಮಾಡುವ ಕುರಿತು ಚರ್ಚೆ ನಡೆದಿದೆ. ಲಾಕ್ ಡೌನ್ ನಿಂದಾಗಿ ಆರ್ಥಿಕತೆಗೆ ಪೆಟ್ಟು ಬೀಳಲಿದೆ. ಹಾಗಾಗಿ ಬೇರೆ ಮಾರ್ಗಗಳ ಕುರಿತು ಚರ್ಚೆ ನಡೆದಿದ್ದು, ನಿಯಮ ಪಾಲಿಸದಿದ್ದರೆ ಲಾಕ್ಡೌನ್ ಹೇರುವ ಸ್ಥಿತಿ ಬರುತ್ತದೆ ಎಂದು ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈಗ ವೀಕೆಂಡ್ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಸೋಂಕು ಭಾರೀ ಹೆಚ್ಚಾಗುತ್ತಿರುವುದರಿಂದ ಲಾಕ್ಡೌನ್ ಜಾರಿಯಾಗಬಹುದು ಎಂದು ಹೇಳಲಾಗಿದೆ.