ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ತಡೆಯಲು ದೇಶಾದ್ಯಂತ ಮತ್ತೆ ಲಾಕ್ಡೌನ್ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಜನರ ಹಿತದೃಷ್ಟಿಯಿಂದ ಇದು ಅಗತ್ಯವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂಕೋರ್ಟ್ ತಿಳಿಸಿದೆ. ದೇಶಾದ್ಯಂತ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿದ್ದು, ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಭಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಶೀಲನೆ ನಡೆಸಬೇಕೆಂದು ಹೇಳಲಾಗಿದೆ.
ಕೋವಿಡ್ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದು, ಲಾಕ್ ಡೌನ್ ಜಾರಿ ಬಗ್ಗೆ ಸಲಹೆ ನೀಡಲಾಗಿದೆ. ಭಾರತೀಯ ವೈದ್ಯಕೀಯ ಮಂಡಳಿ ಕೂಡ ಸೋಂಕಿನ ಸರಪಳಿ ತುಂಡರಿಸಲು ದೇಶಾದ್ಯಂತ ಲಾಕ್ ಡೌನ್ ಘೋಷಿಸಬೇಕೆಂದು ಆಗ್ರಹಿಸಿದೆ.