alex Certify ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್: ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್: ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಅಘೋಷಿತ ಲಾಕ್ ಡೌನ್ ಜಾರಿ ಮಾಡಲಾಗಿದೆ. ಮೇ 4 ರವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ ಜನತೆಗೆ ದಿಢೀರ್ ಶಾಕ್ ನೀಡಿದೆ. ಅಗತ್ಯ ವಸ್ತು, ಸೇವೆಗಳಿಗೆ ಮಾತ್ರ ಅವಕಾಶ ನೀಡಿದೆ. ಮೇ 4 ರ ವರೆಗೆ ವಾಣಿಜ್ಯ ಮಳಿಗೆ, ಅಂಗಡಿ ಮುಂಗಟ್ಟು ಬಂದ್ ಆಗಲಿವೆ.

ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮಾತ್ರ ಅಂಗಡಿ ಬಂದ್ ಮಾಡಬೇಕು ಎಂದುಕೊಂಡಿದ್ದವರಿಗೆ ಶಾಕ್ ನೀಡಿದೆ. ಅಗತ್ಯ ವಸ್ತುಗಳ ಹೊರತಾಗಿ ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ತಿಳಿಸಿ ಅಘೋಷಿತ ಲಾಕ್ಡೌನ್ ಜಾರಿ ಮಾಡಲಾಗಿದೆ.

ಸೆಕ್ಷನ್ 144 ನಿರ್ಬಂಧ ಇದ್ದರೂ ಜನ ಗುಂಪು ಸೇರುವುದನ್ನು ನಿಯಂತ್ರಿಸಲು ಕ್ರಮಕೈಗೊಳ್ಳಲಾಗಿದೆ. ಅಗತ್ಯ ವಸ್ತು, ಸೇವೆ ಹೊರತಾದ ಅಂಗಡಿ ಬಂದ್ ಮಾಡಲು ತಿಳಿಸಿದ್ದು ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ಜೊತೆಯಲ್ಲೇ ಕೊರೋನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...